ಕುಡಿಯುವ ನೀರು, ಮೇವು ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚನೆ

ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ಪರಿಸ್ಥಿತಿ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕುಗಳ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕಳೆದ 3 ರಿಂದ 5 ವರ್ಷಗಳಿಂದ ಹೆಚ್ಚಾಗಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಜನವಸತಿಗಳ ಆಧಾರದಲ್ಲಿ ಪ್ರಸಕ್ತ ವರ್ಷದ ಬೇಸಿಗೆ ಸಮಯದಲ್ಲಿ ಮಾರ್ಚ್‌ ರಿಂದ ಮೇ 2025 ರ ಅಂತ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ 98 ಜನವಸತಿಗಳನ್ನು ಗುರುತಿಸಲಾಗಿದ್ದು, 234 ಖಾಸಗಿ/ ರೈತರ ಕೊಳವೆ ಬಾವಿಗಳನ್ನು ಗುರುತಿಸಿ ಪರ್ಯಾಯವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ JJM ಯೋಜನೆಯಡಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯಕವಿರುವ ಮೊತ್ತದ ತುರ್ತು ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ.

ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಮೇವಿನ ಬೀಜ ಕಿಟ್ ಗಳನ್ನು ರೈತರಿಗೆ ಪೂರೈಸಿ, ಈಗಾಗಲೇ ಗೋಶಾಲೆಗಳಲ್ಲಿ ಅಂದಾಜು 3 ಲಕ್ಷ ಟನ್ ರಷ್ಟು ಮೇವು ಮೇವು ಸಂಗ್ರಹಿಸಿಡಲಾಗಿದೆ ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

4 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

5 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

15 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

1 day ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

1 day ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 day ago