ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ: ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು (*ದೂರವಾಣಿ ಸಂಖ್ಯೆ 080-22221050*) ಕರೆ ಮಾಡಿ ತಿಳಿಸಬಹುದಾಗಿದ್ದು, ಕಂಟ್ರೋಲ್ ರೂಂನಲ್ಲಿ ‌ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ತಕ್ಷಣವೇ ಕುಡಿಯುವ‌ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯನ್ನು ಪರಿಹರಿಸಲು ಕ್ರಮವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗುವ ಗ್ರಾಮ, ನಗರಗಳಲ್ಲಿ ತುರ್ತಾಗಿ ಕುಡಿಯುವ ನೀರನ್ನು ಒದಗಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ವಾರದ 7 ದಿನಗಳಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

2 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

7 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago