ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್. ಅನುರಾಧ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗುವ ಗ್ರಾಮಗಳಲ್ಲಿ ತುರ್ತಾಗಿ ಕುಡಿಯುವ ನೀರನ್ನು ಒದಗಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ವಾರದ 7 ದಿನಗಳಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು (*ದೂರವಾಣಿ ಸಂಖ್ಯೆ 080-22221050*) ಕರೆ ಮಾಡಿ ತಿಳಿಸಬಹುದಾಗಿದ್ದು, ಕಂಟ್ರೋಲ್ ರೂಂನಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯನ್ನು ಪರಿಹರಿಸಲು ಕ್ರಮವಹಿಸಲಿದ್ದಾರೆ.
ಮುಂದಿನ ಮೂರು ತಿಂಗಳಲ್ಲಿ ಜಿಲ್ಲೆಯ ಸುಮಾರು 101 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಅಂತಹ ಪರಿಸ್ಥಿತಿಯಲ್ಲಿ ಖಾಸಗಿ ಬೋರ್‌ವೆಲ್‌ಗಳು ಹಾಗೂ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಿ, ಶುದ್ಧತೆ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…