ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಸಹಾಯವಾಣಿ ಸಂಪರ್ಕಿಸಿ- ಸಿಇಒ ಡಾ.ಕೆ.ಎನ್ ಅನುರಾಧಾ

ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ 24/7 ಕಂಟ್ರೋಲ್ ರೂಂ ನಲ್ಲಿ 080-22221050 ಸಹಾಯವಾಣಿ ತೆರೆಯಲಾಗಿದೆ. 24/7 ಕಂಟ್ರೋಲ್ ರೂಂ ನಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆಯ ಯಾವುದೇ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಮೇಲೆ ತಿಳಿಸಿದ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ, ತಮ್ಮ ಗ್ರಾಮದ ವಿಳಾಸವನ್ನು ತಿಳಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಅದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ವಹಿಸುತ್ತಾರೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಆಯಾ ಗ್ರಾಮ ಪಂಚಾಯಿತಿಯ ಜಲಗಾರ (ವಾಟರ್ ಮ್ಯಾನ್)ಗಳು ಒಳಗೊಂಡಂತೆ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಿಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತಾರೆ ಎಂದು ಸಿಇಒ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!