ವಿರಾಜಪೇಟೆ(ಕೊಡಗು): ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ಜವಾಬ್ದಾರಿಯುತ ಕೇಂದ್ರ ಸಚಿವರಂತೆ ವರ್ತಿಸುತ್ತಿಲ್ಲ, ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ವಕ್ತಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಲೇವಡಿ ಮಾಡಿದರು.
ತಾಲೂಕಿನ ಅಮ್ಮತ್ತಿ ಹೋಬಳಿಯ ಹಾಲುಗುಂದ ಗ್ರಾಮದಲ್ಲಿ ಏರ್ಪಡಿಸಿದ್ದ ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರವನ್ನು ಟೀಕೆ ಮಾಡಲೆಂದೇ
ಕುಮಾರಸ್ವಾಮಿ ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಅವರು ಕೇಂದ್ರ ಸಚಿವರಲ್ಲ, ಟೀಕಾ ಸಚಿವರು ಎಂದು ಕುಟುಕಿದರು.
*ಅಧಿವೇಶನದ ಬಳಿಕ ತೀರ್ಮಾನ*
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಶಾ ಕಾರ್ಯಕರ್ತೆಯರು ಎನ್ಎಚ್ಎಂ ಅಡಿ ಕಾರ್ಯನಿರ್ವಹಿಸುತ್ತಿರುವ ತರಬೇತಿ ಪಡೆದ ಮಹಿಳಾ ಸಮುದಾಯ ಆರೋಗ್ಯ ಸ್ವಯಂ ಸೇವಕಿಯರು. ವೇತನ ಹೆಚ್ಚಳ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯಕ್ಕಿಂತ ಕೇಂದ್ರದ ಜವಾಬ್ದಾರಿ ಹೆಚ್ಚಿದೆ. ರಾಜ್ಯ ಸರ್ಕಾರ ಅವರ ಸೇವೆಗೆ ಅನುಗುಣವಾಗಿ ನೇತನ ನೀಡುತ್ತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ, ಅವರ ಬೇಡಿಕೆಯನ್ನು ತಕ್ಷಣವೇ ಈಡೇರಿಸಲು ಸಾಧ್ಯವಿಲ್ಲ. ಬೆಳಗಾವಿ ಅಧಿವೇಶನದ ಬಳಿಕ ತೀರ್ಮಾನ ಮಾಡುತ್ತೇವೆ ಎಂದರು.
ಸಂಪುಟಕ್ಕೆ ಮಹಿಳೆಯರ ಸೇರ್ಪಡೆ ಕುರಿತ ಪ್ರಶ್ನೆಗೆ ಉತ್ತರಿಸಿ, ಅದೆಲ್ಲವನ್ನೂ ಹೈಕಮಾಮಡ್ ನಾಯಕರು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಮತ ಶುರುವಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಇಬ್ಬರು ನಾಯಕರ ಮಧ್ಯೆ ಯಾವುದೇ ಭಿನ್ನಾಬಿಪ್ರಾಯ ಇಲ್ಲ. ಇದೆಲ್ಲವೂ ಮಾಧ್ಯಮ ಸೃಷ್ಟಿಯಷ್ಟೇ ಎಂದು ಹೇಳಿದರು.
*ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ*
ವಿರಾಜಪೇಟೆ ತಾಲ್ಲೂಕಿನ ಕೊಂಡಂಗೇರಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸುಮಾರು 63 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಸಾರ್ವಜನಿಕರಿಂದ ಸ್ವೀಕರಿಸಿದ ಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಸಚಿವರು ಬಗೆಹರಿಸಿದರು.
ಪ್ರಜಾಸೇವಾ ಅಭಿಯಾನದ ಅರ್ಜಿಗಳು ಸಕಾಲ ವ್ಯಾಪ್ತಿಗೆ ಬರುವುದರಿಂದ ಸಾರ್ವಜನಿಕರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ತಾಕೀತು ಮಾಡಿದರು.
ಪ್ರಜಾಸೇವಾ ಅಭಿಯಾನ ಸಂದರ್ಭದಲ್ಲಿ ವನ್ಯಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಬೇಕು. ಹುಲಿಗಳ ಉಪಟಳ ಹೆಚ್ಚಾಗಿದ್ದು, ಜನರು ಆತಂಕದಿಂದ ಬದುಕುತ್ತಿದ್ದು, ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಕೋರಿದರು.
ಕುಡಿಯುವ ನೀರು ಪೂರೈಕೆ, ರಸ್ತೆ ಮತ್ತು ಸೇತುವೆ ನಿರ್ಮಾಣ, ವಸತಿ ಯೋಜನೆ ಕಲ್ಪಿಸುವುದು ಹೀಗೆ ಹಲವು ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹೆಚ್ಚಿನ ಅಹವಾಲು ಸಲ್ಲಿಸಿದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು.
ಪ್ರತಿ ಪಂಚಾಯ್ತಿಗೆ ಶಾಸಕರ ಅನುದಾನದಡಿ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದರಲ್ಲಿ 25 ಲಕ್ಷ ರೂ.ಗಳನ್ನು ಕುಡಿಯುವ ನೀರಿನ ವ್ಯವಸ್ಥೆಗೆ ಬಳಸಬೇಕು. ಉಳಿದ ಹಣದಲ್ಲಿ ಇತರೆ ಕಾಮಗಾರಿಗಳನ್ನು ನಡೆಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ದೊಡ್ಡಬಳ್ಳಾಪುರ: ನಗರದ ವಿವಾದಿತ ಕೆಮ್ಮಣ್ಣುಗುಂಡಿ ಸಾರ್ವಜನಿಕ ಸ್ಮಶಾನದ ರಸ್ತೆಯನ್ನು ಪ್ರಭಾವಿಯೊಬ್ಬರು ಅತಿಕ್ರಮಿಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಹಲವು ವರ್ಷಗಳಿಂದ…
ನವೆಂಬರ್ 30 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿ ಅಥವಾ "ಅನ್ನ ಸೇವೆ" ಮೊಬೈಲ್ ಅಪ್ಲಿಕೇಶನ್…
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂಬಂಧಿಸಿದಂತೆ ವಿವಿಧ ಹಂತಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವೇಳಾಪಟ್ಟಿಯ ಪ್ರಕಾರ, ನವೆಂಬರ್ 23, 2026 ರೊಳಗೆ…
ಮತ್ತೆ ನೆನಪಿಸುವೆ....... ಚಾಲನಾ ಕಲೆ ಮತ್ತು ಅಪಘಾತ......... ದಯವಿಟ್ಟು - ಮನಸ್ಸಿಟ್ಟು - ತಾಳ್ಮೆಯಿಂದ ಓದಿ....... ಜೀವ ಅಮೂಲ್ಯ....... ಅಲ್ಲಿ…
ಬೆಂಗಳೂರು: ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಹಿಳೆಯರ ಸುರಕ್ಷತೆ ಹಾಗೂ ಅಪರಾಧ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಗೃಹ…
ದೊಡ್ಡಬಳ್ಳಾಪುರ: ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ನಡುವಿನ ಏಳುಕಮಾನು ರೈಲ್ವೆ ಸೇತುವೆ ಸಮೀಪದ ಘಾಟಿ ಗೋಶಾಲೆ ಬಳಿ ರೈಲ್ವೆ…