ಕೋಲಾರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಗುರುವಾರ ನಗರದ ಸಾಯಿ ಬಾಬಾ ಮಂದಿರದಲ್ಲಿ ಜೆಡಿಎಸ್ ಪಕ್ಷದಿಂದ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವರಲ್ಲಿ ಪ್ರಾರ್ಥಿಸಿ ಶೀಘ್ರ ಚೇತರಿಕೆ ಕಂಡು ರಾಜ್ಯದ ಜನತೆಗೆ ಇನ್ನಷ್ಟು ಸೇವೆಸಲ್ಲಿಸುವಂತಾಗಲಿ ಅ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡಿದ್ದೇವೆ ಎಂದರು.
ರಾಜ್ಯದಲ್ಲಿ ಎನ್.ಡಿ.ಎ ಮೈತ್ರಿಕೂಟದಿಂದ ಕೋಲಾರ, ಮಂಡ್ಯ, ಮತ್ತು ಹಾಸನ ಮೂರು ಕಡೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಮೈತ್ರಿಕೂಟದ ಪಕ್ಷಗಳಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದು ಒಮ್ಮತದಿಂದ ಅವರ ಸಲಹೆ ಸೂಚನೆ ನಿರೀಕ್ಷೆಗಳೊಂದಿಗೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಮೈತ್ರಿಯ ನಿಯಮಾನುಸಾರವಾಗಿ ಪಾಲನೆ ಮಾಡುತ್ತೇವೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲದೇ ವರಿಷ್ಠರ ತೀರ್ಮಾನಕ್ಕೆ ಬದ್ದವಾಗಿ ಚುನಾವಣೆ ಎದುರಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಮಲ್ಲೇಶ್ ಬಾಬು, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು ನಗರಸಭೆ ಸದಸ್ಯ ರಾಕೇಶ್, ಮುಖಂಡರಾದ ಜಡೇರಿ ಗೋಪಾಲಗೌಡ, ಮುದುವಾಡಿ ಮಂಜು, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಜನಪನಹಳ್ಳಿ ಆನಂದ್, ತೋಟಗಳ ಅಶೋಕ್, ವಿಜಯಗೌಡ, ಚಂಬೆ ರಾಜೇಶ್, ಯಲುವಗುಳಿ ನಾಗರಾಜ್, ಜಯಚಂದ್ರ, ಮುಂತಾದವರು ಇದ್ದರು