ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ/ಮೇಕೆ ಸಾಕಣೆಗೆ ಆರ್ಥಿಕ ನೆರವು ನೀಡುವ ಯೋಜನೆಯಡಿ ಫಲಾನುಭವಿಗಳ ಆಯ್ಕೆಗಾಗಿ ಉಪನಿರ್ದೇಶಕರ ಕಚೇರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹೆಬ್ಬಾಳ, ಬೆಂಗಳೂರು ಇವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು (ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು) ಸಂಘಗಳು ಇಲ್ಲದೇ ಇರುವ ತಾಲ್ಲೂಕಿನಲ್ಲಿ ಅರ್ಹ ಕುರಿ ಸಾಕಾಣಿಕೆದಾರರು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಅದೇ ಕಚೇರಿಗೆ ಆಗಸ್ಟ್ 16 ರೊಳಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ವಿವರಗಳನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ). ಪಶುಪಾಲನಾ ಇಲಾಖೆ ಅಥವಾ ಉಪ ನಿರ್ದೇಶಕರವರ ಕಚೇರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹೆಬ್ಬಾಳ, ಬೆಂಗಳೂರು ಇವರಿಂದ (ದೂರವಾಣಿ ಸಂಖ್ಯೆ: 080-23413294) ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.