ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ)
ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
View Comments
I need ship sid