ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಪ್ರಯಾಣಿಕನಿಂದ ₹ 3.44 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಆರೋಪಿಯೂ ಕುರುಡನಾಗಿದ್ದು (ಕಣ್ಣು ಇಲ್ಲದವ) ಕಳೆದ ಮಂಗಳವಾರ (ಮಾರ್ಚ್ 4) ದಂದು 3 ಕೆ.ಜಿ 995 ಗ್ರಾಂ ಚಿನ್ನದ ಆಭರಣವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದಿದ್ದಾನೆ.
ಕುರುಡನಾಗಿರುವುದನ್ನೇ ಅನುಕೂಲ ಮಾಡಿಕೊಂಡಿದ್ದ ಆರೋಪಿಯೂ, ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸುವ ಸಂಚು ರೂಪಿಸಿದ್ದು, ಆತನು ಧರಿಸಿದ್ದ ಅಂಗಿಯ ಒಳಗೆ ಮುಚ್ಚಿಟ್ಟು ಕೊಂಡು ಚಿನ್ನವನ್ನು ಕಳ್ಳ ಸಾಗಣೆಗೆ ಯತ್ನಿಸಿದ್ದ.
ಇತನ ವರ್ತನೆ ಮೇಲೆ ಅನುಮಾನ ಬಂದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…