ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.
ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.
ಕುರುಬರನ್ನು ಎಸ್.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದರು.
ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.
ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…