ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ- ಸಿಎಂ ಸಿದ್ದರಾಮಯ್ಯ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

4 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

8 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

11 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

13 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago