ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

3 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

7 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

23 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

24 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago