ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ-ಅಧ್ಯಾಪಕ ಜೆ.ಪಿ.ಉಪಾಧ್ಯೆ

‘ಮನುಷ್ಯ ಜಾತಿ ತಾನೊಂದು ವಲಂ’ ಎಂದು‌ ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ  ಜೆ.ಪಿ.ಉಪಾಧ್ಯೆ ತಿಳಿಸಿದರು.

ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.‌

ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.  ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.  ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.

ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು.  ವೈಚಾರಿಕತೆಯನ್ನು  ಕುವೆಂಪು ತಮ್ಮ  ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

7 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

9 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

11 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

20 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago