ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ ಆಗಿದ್ದಾರೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಾಹಿತ್ಯ ಓದಿನಿಂದ ವಿವೇಚನೆ ಬೆಳೆಯುತ್ತದೆ ಮತ್ತು ಹಸನಾಗುತ್ತದೆ. ಯಾವುದೇ ವಿಚಾರವಿರಲಿ ಅದನ್ನು ಒರೆಗಲ್ಲಿಗೆ ಹಚ್ಚಬೇಕು. ಯಾರೋ ಹೇಳಿದ್ದನ್ನು ಸುಮ್ಮನೆ ಕೇಳಬಾರದು. ಅಂಧಾನುಕರಣೆ ಎಂದಿಗೂ ಒಳಿತಲ್ಲ.ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗಲಿವೆ ಎಂದರು..
ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮತನಾಡಿ, ಸಾಹಿತ್ಯ ಹೇಗೆ ಬದುಕಬೇಕು ಎಂಬುದನ್ನು ಮತ್ತು ವಿಜ್ಞಾನ ಹೇಗೆ ಯೋಚಿಸಬೇಕು ಎಂಬುದನ್ನು ಕಲಿಸುತ್ತದೆ. ಕನ್ನಡ ಅಭಿಮಾನ ನವಂಬರ್ ತಿಂಗಳಿಗಷ್ಟೇ ಸೀಮಿತ ಆಗಬಾರದು. ಕನ್ನಡ ಪತ್ರಿಕೆ, ಪುಸ್ತಕಗಳ ಓದು ಕನ್ನಡ ಅಭಿವೃದ್ಧಿಯ ಸೂಚ್ಯಂಕವನ್ನು ತೋರಿಸಿತ್ತವೆ ಎಂದರು.
ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ನೂರು ಭಾಷೆಗಳು ನಾಲಿಗೆ ಮೇಲೆ ಇದ್ದರೂ, ಮನದಾಳದ ಭಾಷೆ ಕನ್ನಡವಾಗಿರಲಿ. ಗೋಕಾಕ್ ಚಳುವಳಿಗೆ ಡಾ.ರಾಜ್ ಕುಮಾರ್ ಜೀವತುಂಬಿದರು. ಗೋಕಾಕ್ ವರದಿ ಜಾರಿಯಿಂದ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಯಿತು ಎಂದರು.
ವೈದ್ಯ ಲೇಖಕಿ ಡಾ.ಇಂದಿರಾ ಮಾತನಾಡಿ, ಹದಿಹರೆಯದಲ್ಲಿ ಆಗಾಧವಾದ ಶಕ್ತಿಯಿರುತ್ತದೆ. ಆ ಶಕ್ತಿ ದೇಹದಲ್ಲಿ ಮತ್ತು ಮಿದುಳಿನಲ್ಲಿ ಇರುತ್ತದೆ. ಹದಿಹರೆಯದವರಿಗೆ ಬೆಳೆಯುವ ವಯಸ್ಸಿನಲ್ಲಿ ಪೌಷ್ಟಿಕಾಹಾರ ಪದ್ದತಿ ಬಗ್ಗೆ ಅರಿವು ಇರಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜವಾಹರ ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿ ಸಫೀರ್, ಸಹಶಿಕ್ಷಕರುಗಳಾದ ಡಾ.ಮುನಿರಾಜು, ಎಚ್.ಎನ್.ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…