ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ- ಬಲವಂತರಾವ್ ಪಾಟೀಲ್

ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ ಆಗಿದ್ದಾರೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ  ಬಲವಂತರಾವ್ ಪಾಟೀಲ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಹಿತ್ಯ ಓದಿನಿಂದ ವಿವೇಚನೆ ಬೆಳೆಯುತ್ತದೆ‌ ಮತ್ತು ಹಸನಾಗುತ್ತದೆ. ಯಾವುದೇ ವಿಚಾರವಿರಲಿ ಅದನ್ನು ಒರೆಗಲ್ಲಿಗೆ ಹಚ್ಚಬೇಕು.‌ ಯಾರೋ ಹೇಳಿದ್ದನ್ನು ಸುಮ್ಮನೆ ಕೇಳಬಾರದು. ಅಂಧಾನುಕರಣೆ ಎಂದಿಗೂ ಒಳಿತಲ್ಲ.ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗಲಿವೆ ಎಂದರು..

ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮತನಾಡಿ, ಸಾಹಿತ್ಯ ಹೇಗೆ ಬದುಕಬೇಕು ಎಂಬುದನ್ನು ಮತ್ತು ವಿಜ್ಞಾನ ಹೇಗೆ ಯೋಚಿಸಬೇಕು‌ ಎಂಬುದನ್ನು ಕಲಿಸುತ್ತದೆ. ಕನ್ನಡ ಅಭಿಮಾನ ನವಂಬರ್ ತಿಂಗಳಿಗಷ್ಟೇ ಸೀಮಿತ ಆಗಬಾರದು. ಕನ್ನಡ ಪತ್ರಿಕೆ‌, ಪುಸ್ತಕಗಳ ಓದು ಕನ್ನಡ ಅಭಿವೃದ್ಧಿಯ ಸೂಚ್ಯಂಕವನ್ನು ತೋರಿಸಿತ್ತವೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ನೂರು ಭಾಷೆಗಳು ನಾಲಿಗೆ ಮೇಲೆ ಇದ್ದರೂ, ಮನದಾಳದ ಭಾಷೆ ಕನ್ನಡವಾಗಿರಲಿ. ಗೋಕಾಕ್ ಚಳುವಳಿಗೆ ಡಾ.ರಾಜ್ ಕುಮಾರ್ ಜೀವತುಂಬಿದರು. ಗೋಕಾಕ್ ವರದಿ ಜಾರಿಯಿಂದ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಯಿತು ಎಂದರು.

ವೈದ್ಯ ಲೇಖಕಿ ಡಾ.ಇಂದಿರಾ ಮಾತನಾಡಿ, ಹದಿಹರೆಯದಲ್ಲಿ ಆಗಾಧವಾದ ಶಕ್ತಿಯಿರುತ್ತದೆ. ಆ ಶಕ್ತಿ ದೇಹದಲ್ಲಿ ಮತ್ತು ಮಿದುಳಿನಲ್ಲಿ ಇರುತ್ತದೆ. ಹದಿಹರೆಯದವರಿಗೆ ಬೆಳೆಯುವ ವಯಸ್ಸಿನಲ್ಲಿ ಪೌಷ್ಟಿಕಾಹಾರ ಪದ್ದತಿ ಬಗ್ಗೆ ಅರಿವು ಇರಬೇಕು ಎಂದರು.

ಕಾರ್ಯಕ್ರಮದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಸಹಾಯಕ ನಿರ್ದೇಶಕ ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜವಾಹರ ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿ ಸಫೀರ್, ಸಹಶಿಕ್ಷಕರುಗಳಾದ ಡಾ.ಮುನಿರಾಜು, ಎಚ್.ಎನ್.ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

10 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

20 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago