ಕುಸುಮ್-ಸಿ ಯೋಜನೆ: ನಾಳೆ ಗೌರಿಬಿದನೂರಿನಲ್ಲಿ ಉದ್ಘಾಟನೆ- ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ ಐಪಿ ಸೆಟ್‌ಗಳಿಗೆ ವಿದ್ಯುತ್ – ಸಚಿವ ಕೆ.ಜೆ.ಜಾರ್ಜ್‌

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್‌ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು.

“ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ,” ಎಂದು ಹೇಳಿದರು.

“ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.

*ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ*:

“ಕುಸುಮ್ – ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ್ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‌ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

“ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ) ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು,” ಎಂದು ಮಾಹಿತಿ ನೀಡಿದರು.

“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದರು.

“ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.

ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್ , ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

27 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

3 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago