ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಡೆದಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಟೊಮೆಟೊಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿವೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಪೊಲೀಸರು ಪರಿಶೀಲನೆ ನಡೆಸಿ, ರಸ್ತೆಗೆ ಬಿದ್ದಿದ್ದ ಟೊಮೆಟೊ ಟ್ರೇಗಳು ಹಾಗೂ ಲಾರಿಯನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!