ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಡೆದಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಟೊಮೆಟೊಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿವೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಪೊಲೀಸರು ಪರಿಶೀಲನೆ ನಡೆಸಿ, ರಸ್ತೆಗೆ ಬಿದ್ದಿದ್ದ ಟೊಮೆಟೊ ಟ್ರೇಗಳು ಹಾಗೂ ಲಾರಿಯನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…