Categories: ಯಾದಗಿರಿ

ಕೂಲಿ ಕಾರ್ಮಿಕರನ್ನ ಹೊತ್ತೊಯ್ಯುತ್ತಿದ್ದ ಬೊಲೆರೊ ವಾಹನ ಪಲ್ಟಿ: ಓರ್ವ ಕಾರ್ಮಿಕ‌ ಮಹಿಳೆ ಸಾವು: ಮೂವರು ಸ್ಥಿತಿ ಗಂಭೀರ

ಕೂಲಿ ಕಾರ್ಮಿಕರನ್ನ ಹೊತ್ತೊಯ್ಯುತ್ತಿದ್ದ ಬೊಲೆರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಕಾರ್ಮಿಕ‌ ಮಹಿಳೆ ಸಾವನ್ನಪ್ಪಿದ್ದು, ಮೂವರು ಮಹಿಳಾ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸದಬ್ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.

ಲಕ್ಷ್ಮೀ ಚಂದ್ರಶೇಖರ ನಗನೂರ (40), ಸಾವನ್ನಪ್ಪಿದ ಸದಬ್ ಗ್ರಾಮದ ಕೂಲಿ ಕಾರ್ಮಿಕ ಮಹಿಳೆ.

ಹುಣಸಗಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಿಂದ 48 ಜನ ಕಾರ್ಮಿಕರನ್ನ ಬೊಲೆರೊ ವಾಹನ ಹೊತ್ತೊಯ್ಯುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕೆಂಭಾವಿ ಮುಖ್ಯ ರಸ್ತೆಯಲ್ಲಿ ಪಲ್ಟಿಯಾಗಿದೆ.

ಸದ್ಯ ಗಾಯಾಳುಗಳನ್ನ ಹುಣಸಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

10 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

23 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago