ಕೃತಕ ಆಭರಣ ತಯಾರಿಕೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕೃತಕ ಆಭರಣ ತಯಾರಿಕೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

14 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

15 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

23 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago