ಕೃಷಿ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಸ್ಥಾನಕ್ಕೆ ಧ್ರುವ ಸರ್ಜಾ ಅವರನ್ನು ನೇಮಕ ಮಾಡಿ- ರೈತ ಅಂಬರೀಶ್ ಮನವಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಂಬರ್ 2 ನಟ ದರ್ಶನ್ ಅವರನ್ನ ಕೃಷಿ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮತ್ತು 2019 ರ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿದ್ದ ನಟನ ವಿರುದ್ಧ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ತೆರವಾದ ಸ್ಥಾನಕ್ಕೆ ನಟ ಧ್ರುವ ಸರ್ಜಾ ಅವರನ್ನು ನೇಮಕ ಮಾಡುವಂತೆ ರೈತ ಮುಖಂಡ ಅಂಬರೀಶ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!