ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ

ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19 ರಿಂದ 23 ರವರೆಗೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಈವರೆಗೆ 95 ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದು, 66 ಬಿತ್ತನೆ ಬೀಜದ ಮಾದರಿಗಳು, 36 ರಸಗೊಬ್ಬರ ಮಾದರಿಗಳು ಮತ್ತು 21 ಕೀಟನಾಶಕ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟ ಪರಿಶೀಲನೆಗಾಗಿ ಕಳುಹಿಸಿದ್ದು, ಇದರಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು.

*ರೈತರು ಹೊಲಗಳಲ್ಲಿ ಕಂದಕ, ಬದುಗಳನ್ನು ನಿರ್ಮಿಸಿ*
ಜಲಾನಯನ ಹಾಗೂ ನರೇಗಾ ಯೋಜನೆಯಡಿ ವ್ಯಾಪ್ತಿಗೆ ಒಳಪಡುವ ಎಲ್ಲಾ ರೈತರು ತಮ್ಮ ಜಮೀನುಗಳಲ್ಲಿ ಇಂಗು ಗುಂಡಿಗಳನ್ನು (5 ಮೀ ಉದ್ದ , 1 ಮೀ ಅಗಲ, 2ಅಡಿ ಆಳ) ನಿರ್ಮಾಣ ಮಾಡಿಕೊಳ್ಳಬೇಕು. ಈ ರೀತಿಯಲ್ಲಿ ಎಕರೆಗೆ 20 ಕಂದಕಗಳನ್ನು ನಿರ್ಮಿಸಿದರೆ, ಒಂದು ಕಂದಕದಿಂದ 3 ಸಾವಿರ ಲೀಟರ್ ನಂತೆ, ಒಟ್ಟಾರೆ 20 ಕಂದಕದಿಂದ 50 ಸಾವಿರ ಲೀಟರ್ ನೀರನ್ನು ಸಂಗ್ರಹಿಸಬಹುದು. ಹೀಗೆ ವರ್ಷದಲ್ಲಿ ಬೀಳುವ 8 ರಿಂದ 10 ಮಳೆಗೆ ಕನಿಷ್ಠ 5 ಲಕ್ಷ ಲೀಟರ್ ನೀರನ್ನು ಶೇಖರಿಸಬಹುದು.ಈ ರೀತಿ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಎಲ್ಲಾ ಕೊಳವೆ ಬಾವಿಗಳಲ್ಲಿ ನೀರು ಸಿಗುವ ಲಭ್ಯತೆ ಹೆಚ್ಚಾಗುತ್ತದೆ. ಮಳೆಗಾಲ ಮುಗಿದ ನಂತರ ಟ್ಯಾಂಕರ್ ನೀರಿನ ಮೇಲಿನ ಅವಲಂಬನೆ ಕ್ರಮೇಣ ಕಡಿಮೆಯಗುತ್ತದೆ.

*ದೇಸಿ ತಳಿ ಇದ್ದರೆ ನೋಂದಾಯಿಸಿಕೊಳ್ಳಿ*
ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಕೃಷಿ ಇಲಾಖೆ ವತಿಯಿಂದ ಸಂರಕ್ಷಣೆ ಮತ್ತು ಉತ್ತೇಜನ ನೀಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರಾಯಿಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.

ಈ ಕಾರ್ಯಕ್ರಮದಡಿ ಭತ್ತ,ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು,ಹುಚ್ಚೆಳ್ಳು, ಕಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ ಮತ್ತು ಬರಗು ಆಯ್ಕೆಯಾದ ಬೆಳೆಗಳಾಗಿವೆ. ಹಾಗೇ ಜಾನುವಾರು ಸಾಕಾಣಿಕೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಮತ್ತು ಇತರೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರನ್ನು ಕೃಷಿ ಇಲಾಖೆಯು ಪ್ರೋತ್ಸಾಹಿಸಲಾಗುತ್ತದೆ. ಸಲಹಾ ಸಮಿತಿ ಶಿಫಾರಸ್ಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳನ್ನು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಸಹಕಾರಿಯಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

9 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

14 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago