ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಬೇಕು ಎಂದು ಮಾಹಿತಿ ನೀಡಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದ್ದು, ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಬಿತ್ತನೆಗೆ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಇದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧದ ರಸಗೊಬ್ಬರಕ್ಕೆ ಆದ್ಯತೆ ನೀಡದೆ. ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ಸಹ ಬಳಸಬಹುದು.

ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು ಎಂದು ತಿಳಿಸಿದೆ.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ 1630ರೂ. ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ. ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ. ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದೆ. ಪ್ರತಿ ಹೆಕ್ಟೇರಿಗೆ 2500ರೂ. ಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ, ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರಮುಖವಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

1 second ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 hour ago

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

4 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

6 hours ago

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

9 hours ago

ದೊಡ್ಡಬಳ್ಳಾಪುರ ಬರ ಘೋಷಣೆಗೆ ಕ್ರೆಡಿಟ್ ಫೈಟ್: ಸರ್ಕಾರ ಈಗಾಗಲೇ ಬರ ಘೋಷಿಸಿದೆ; ಮತ್ತೆ ಮನವಿ ಏಕೆ?: ವೆಂಕಟರಮಣಯ್ಯಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತಿರುಗೇಟು

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

9 hours ago