ಕೃಷಿ ತ್ಯಾಜ್ಯದಿಂದ ಜೈವಿಕ ಇಂಧನ: ರೈತರಿಗೆ ಹೆಚ್ಚುವರಿ ಆದಾಯದ ದಾರಿ ಪರಿಸರ ಸಂರಕ್ಷಣೆಗೆ ಜೈವಿಕ ಇಂಧನ ಬಳಕೆ ಅಗತ್ಯ: ಕೃಷಿ ವಿಜ್ಞಾನಿಗಳು

ಬೆಂಗಳೂರು ಗ್ರಾಮಾಂತರ: ನವೀಕರಿಸಲಾಗದ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಕೃಷಿ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಕೃಷಿ ಅವಶೇಷಗಳನ್ನು ಜೈವಿಕ ಇಂಧನವಾಗಿ ಪರಿವರ್ತಿಸುವ ಮೂಲಕ ರೈತರಿಗೆ ಹೆಚ್ಚುವರಿ ಆದಾಯದ ಮೂಲ ಕಲ್ಪಿಸುವುದರ ಜೊತೆಗೆ ಪರಿಸರ ಮಾಲಿನ್ಯವನ್ನೂ ನಿಯಂತ್ರಿಸಬಹುದು ಎಂದು ಕೃಷಿ ವಿಜ್ಞಾನಿಗಳು ಅಭಿಪ್ರಾಯಪಟ್ಟರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನಿ (ಬೇಸಾಯಶಾಸ್ತ್ರ) ಡಾ. ನಿಂಗರಾಜು ಜಿ.ಕೆ., ದೇಶದ ಕೃಷಿ ಕ್ಷೇತ್ರದಲ್ಲಿ ಭತ್ತದ ಹುಲ್ಲು, ಕಬ್ಬಿನ ತ್ಯಾಜ್ಯ, ಜೋಳದ ಅವಶೇಷಗಳು, ತೆಂಗಿನ ಚಿಪ್ಪು ಸೇರಿದಂತೆ ಅಪಾರ ಪ್ರಮಾಣದ ಜೈವಿಕ ಸಂಪನ್ಮೂಲಗಳು ಲಭ್ಯವಿವೆ. ಇವುಗಳನ್ನು ಸೂಕ್ತ ತಂತ್ರಜ್ಞಾನ ಬಳಸಿ ಇಂಧನವಾಗಿ ಪರಿವರ್ತಿಸುವ ಮೂಲಕ ಪರ್ಯಾಯ ಇಂಧನ ಮೂಲಗಳನ್ನು ಅಭಿವೃದ್ಧಿಪಡಿಸಬಹುದು ಎಂದರು.

ಕೃಷಿ ಅವಶೇಷಗಳನ್ನು ಸುಡುವುದರಿಂದ ವಾಯುಮಾಲಿನ್ಯ ಹಾಗೂ ಹಸಿರುಮನೆ ಅನಿಲಗಳ ಹೊರಸೂಸುವಿಕೆ ಹೆಚ್ಚಾಗುತ್ತದೆ. ಹೀಗಾಗಿ ಅವಶೇಷಗಳನ್ನು ಸುಡುವ ಬದಲು ಅವುಗಳನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸುವುದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಕೃಷಿ ತ್ಯಾಜ್ಯದ ಮೌಲ್ಯವರ್ಧನೆ ಸಾಧ್ಯವಾಗಲಿದೆ ಎಂದು ಹೇಳಿದರು.

ಬದುಗಳಲ್ಲಿ ಜೈವಿಕ ಇಂಧನ ಸಸಿ ಬೆಳೆಸಲು ಸಲಹೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಬಿ.ಜಿ, ರೈತರು ತಮ್ಮ ಜಮೀನಿನ ಬದುಗಳಲ್ಲಿ ಆಹಾರ ಬೆಳೆಗಳ ಉತ್ಪಾದನೆಗೆ ಧಕ್ಕೆಯಾಗದಂತೆ ಹೊಂಗೆ, ಬೇವು, ಹಿಪ್ಪೆ, ಸುರಹೊನ್ನೆ ಸೇರಿದಂತೆ ಜೈವಿಕ ಇಂಧನಕ್ಕೆ ಉಪಯುಕ್ತವಾದ ಸಸಿಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಈ ಸಸ್ಯಗಳಿಂದ ದೊರೆಯುವ ಎಣ್ಣೆಯನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸಬಹುದಾಗಿದ್ದು, ಇದರಿಂದ ರೈತರಿಗೆ ಹೆಚ್ಚುವರಿ ಆದಾಯ ದೊರೆಯುವ ಅವಕಾಶವಿದೆ. ಕೃಷಿಯೊಂದಿಗೆ ಜೈವಿಕ ಇಂಧನ ಉತ್ಪಾದನೆಯನ್ನೂ ಉತ್ತೇಜಿಸುವ ಮೂಲಕ ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೈವಿಕ ಇಂಧನದ ಮಹತ್ವ, ಉತ್ಪಾದನಾ ವಿಧಾನಗಳು, ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಅದರ ಪಾತ್ರ ಹಾಗೂ ಪರಿಸರ ಸಂರಕ್ಷಣೆಯ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಜೈವಿಕ ಇಂಧನ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ. ಗೋಪಿಕಾ ಸಿ. ಮುತ್ತಗಿ, ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯಕ್, ಕೃಷಿ ವಿಸ್ತರಣೆ ವಿಜ್ಞಾನಿ ಡಾ. ಗೋಪಾಲ್, ಕ್ಷೇತ್ರ ಸಹಾಯಕ ಜಗದೀಶ್ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳ ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

7 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

12 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

18 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago