Categories: ಧಾರವಾಡ

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸಬೇಕು- ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಹೇಳಿದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ತಿಳಿಸಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು, ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಅವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕೃಷಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ.
ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದು ಹೇಳಿದರು.

ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ.90 ಪರಿಹಾರ ನೀಡಿ, ಪ್ರಗತಿಯ ವರದಿ ನೀಡಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಅಭಿನಂದನೆಗಳು ಎಂದರು.

Ramesh Babu

Journalist

Share
Published by
Ramesh Babu

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

3 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

10 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

16 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago