ತಾಲೂಕಿನ ಕಸಬಾ ಹೋಬಳಿ ಕೋಳೂರಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಮಗು ಮೃತಪಟ್ಟಿರುವ ಧಾರುಣ ಘಟನೆ ಭಾನುವಾರ ನಡೆದಿದೆ.
ಕೋಳೂರು ನಿವಾಸಿಗಳಾದ ರೂಪ(35), ಹೇಮಂತ್(9) ಮೃತರು. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಅವಘಡ ಸಂಭವಿಸಿದೆ.
9ವರ್ಷದ ಹೇಮಂತ್ ಕೃಷಿ ಹೊಂಡದ ಬದುವಿನ ಮೇಲೆ ಆಟವಾಡುವಾಗ ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾನೆ. ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಸ್ಥಳೀಯರು ಮೃತದೇಹಗಳನ್ನು ಹೊರತೆಗೆದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.