ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸೋತೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋತೆನಹಳ್ಳಿ ಗ್ರಾಮದ ಕೃಷ್ಣಮೂರ್ತಿ ಜಮೀನಿನಲ್ಲಿ ಕೃಷಿ ಹೊಂಡದಲ್ಲಿ ಬಿಂದಿಯಲ್ಲಿ ನೀರು ತುಂಬಲು ಹೋಗಿ ಕೇಶವ (45) ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.
ಮೃತರಿಗೆ ಪತ್ನಿ ಸೇರಿ ಒಂದು ಗಂಡು ಒಂದು ಹೆಣ್ಣು ಆಗಲಿದ್ದು, ಕೆಜಿಎಫ್ ಮೂಲದವರು ಎಂದು ತಿಳಿದು ಬಂದಿದೆ. ಕೆಲಸಕ್ಕಾಗಿ ಬಂದಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಸಮಯದಲ್ಲಿ ನೀರಿಗಾಗಿ ಇಳಿದು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಮೃತ ದೇಹವನ್ನು ದಡಕ್ಕೆ ಸೇರಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…