ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.
ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್‌ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.
ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…