ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿಂದು ನಡೆದಿದೆ.
ಕಿರಣ (6), ಶರತ್ (6),ಹಣಮೇಶ್ (7), ಬಸಮ್ಮ (11) ಮೃತಪಟ್ಟ ದುರ್ದೈವಿಗಳು.
ಈ ಘಟನೆಯಿಂದ ಇಡೀ ಗ್ರಾಮವೇ ಕಣ್ಣೀರಿನಲ್ಲಿ ಮುಳುಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಶಾಲೆಗೆ ರಜೆ ಇದ್ದ ಕಾರಣ ಗ್ರಾಮದ ಮಕ್ಕಳು ಸಂಭ್ರಮದಿಂದ ಆಟವಾಡುತ್ತಾ ಸಮೀಪದ ಜಮೀನಿನಲ್ಲಿದ್ದ ಕೃಷಿ ಹೊಂಡದ ಬಳಿ ತೆರಳಿದ್ದಾರೆ. ಹೊಂಡದ ಆಳದ ಅರಿವಿಲ್ಲದ ಮಕ್ಕಳು ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ ಒಬ್ಬ ಮಗು ನೀರಿನಲ್ಲಿ ಮುಳುಗುವುದನ್ನು ಕಂಡು, ಆತನನ್ನು ರಕ್ಷಿಸಲು ಹೋದ ಉಳಿದ ಮೂವರು ಕೂಡ ಒಬ್ಬರ ಹಿಂದೆ ಒಬ್ಬರಂತೆ ನೀರಿನ ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್, ಕೆಂಭಾವಿ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ್ರಾಯ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ನಗನೂರು ಗ್ರಾಮದಲ್ಲಿ ಈಗ ನೀರವ ಮೌನ ಆವರಿಸಿದ್ದು, ಅಕಾಲಿಕವಾಗಿ ಮೃತಪಟ್ಟ ಮಕ್ಕಳ ನೆನಪಿನಲ್ಲಿ ಪ್ರತಿ ಮನೆಯೂ ಸೂತಕದ ಛಾಯೆಯಲ್ಲಿ ಮುಳುಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…
ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…
ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…
ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…