Categories: ಕೋಲಾರ

ಕೆಂಪೇಗೌಡರು ದೇಶದ ಆಸ್ತಿ- ವಿಶ್ವ ಕಂಡ ದಕ್ಷ, ದೂರದೃಷ್ಠಿಯಳ್ಳ ಆಡಳಿತಗಾರ: ಶಾಸಕ ಕೊತ್ತೂರು ಮಂಜುನಾಥ

ಕೋಲಾರ : ನಾಡಪ್ರಭು ಕೆಂಪೇಗೌಡರು ಒಂದು ಜಾತಿ ಜನಾಂಗಕ್ಕೆ ಸೀಮಿತವಲ್ಲ ಇಡಿ ದೇಶದ ಆಸ್ತಿಯಾಗಿದ್ದು ಅವರ ದೂರದೃಷ್ಟಿಯ ಪರಿಣಾಮವಾಗಿಯೇ ಬೆಂಗಳೂರು ಇವತ್ತು ಬೃಹತಾಕಾರದಲ್ಲಿ ಬೆಳೆದು ವಿಶ್ವ ಮಟ್ಟದಲ್ಲಿ ಸ್ಥಾನವನ್ನು ಪಡೆದು ಕಂಗೊಳಿಸುತ್ತಿದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ಸಾರಿಗೆ ಡಿಪೋನಲ್ಲಿ ಕೆ.ಎಸ್.ಆರ್.ಟಿ.ಸಿಯ ಕೆಂಪೇಗೌಡ ನೌಕರರ ಸಂಘದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಶ್ವದ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ನಿರ್ಮಾಣಕ್ಕೆ ನಾಡಪ್ರಭು ಕೆಂಪೇಗೌಡ ಪಾತ್ರ ಬಹುಮುಖ್ಯವಾಗಿದೆ ಅವರು ಮುಂದಿನ ನೂರು ವರ್ಷಗಳ ದೂರದೃಷ್ಟಿಯನ್ನು ಹೊಂದಿದ್ದ ಆಡಳಿತಗಾರರಾಗಿದ್ದು ಅವರ ಆಡಳಿತ ವೈಖರಿ ಇಂದಿಗೂ ಮಾದರಿಯಾಗಿದೆ ಜೊತೆಗೆ ಇವತ್ತಿನ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಅವರ ಆದರ್ಶವಾಗಬೇಕಾಗಿದೆ ಎಂದರು.

ಕೆಂಪೇಗೌಡರು ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಕೈಗಾರಿಕೆಗಳೆ ಜಾಗವನ್ನು ಗುರುತಿಸಿದ್ದರು ಪ್ರತಿಯೊಂದು ಹಂತದಲ್ಲೂ ಜನಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ ಅವರ ಕೆಲಸಗಳು ಇಂದಿಗೂ ಮಾದರಿಯಾಗಿದೆ. ಅತ್ಯುತ್ತಮ ಆಡಳಿತಗಾರರಾಗಿದ್ದ ಕೆಂಪೇಗೌಡರು ಅಂದಿನ ಕಾಲದಲ್ಲಿ ಆಡಳಿತದ ಸೂತ್ರಗಳನ್ನು ರೂಪಿಸಿ ಅದರ ಮೂಲಕ ಪ್ರಾಮಾಣಿಕವಾಗಿ ಮುನ್ನಡೆಯುವಂತೆ ಮಾಡಿದ್ದು ಇಂದಿಗೂ ಇತಿಹಾಸ ಪುಟಗಳಿಂದ ತಿಳಿಯಬಹುದಾಗಿದೆ. ಕೆಂಪೇಗೌಡರು ಅಂದಿನ ಕಾಲದಲ್ಲಿಯೇ ಕೆರೆ ಕಟ್ಟೆ, ನೈರ್ಮಲ್ಯಕ್ಕೆ ಪ್ರಾಧ್ಯಾನತೆ, ಕಟ್ಟಡಗಳ ನಿರ್ಮಾಣ, ಗೋಪುರಗಳ ಮೂಲಕ ಗಡಿಗಳನ್ನು ಗುರುತಿಸುವುದು ಸೇರಿದಂತೆ ಇನ್ನಿತರ ಮಹತ್ವ ಕಾರ್ಯಗಳನ್ನು ಮಾಡಿದ್ದು ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಇವತ್ತು ಸಂವಿಧಾನದಿಂದ ಸಮಾಜಿಕ ನ್ಯಾಯ ಸಿಗುತ್ತಿದೆ ಆದರೆ ಕೆಂಪೇಗೌಡರು ಅವತ್ತೇ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಸಾಮಾಜಿಕ ನ್ಯಾಯವನ್ನು ಕೊಡಿಸಿದ್ದಾರೆ ಒಕ್ಕಲಿಗ ಸಮುದಾಯವು ಎಲ್ಲಾ ಜಾತಿ ಜನಾಂಗವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಸಮುದಾಯವಾಗಿದೆ ಸರ್ಕಾರಗಳು ಕೆಂಪೇಗೌಡರ ನೆನಪಿಗಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಅವರ ಹೆಸರನ್ನು ಇಟ್ಟಿದ್ದಾರೆ ಜೊತೆಗೆ 108 ಎತ್ತರದ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಅವರ ಮಾರ್ಗದರ್ಶನದಲ್ಲಿ ಗೌರವಯುತವಾಗಿ ನಾವು ಎಲ್ಲರೂ ನಡೆಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಕೆಂಪೇಗೌಡರಿಂದ ಅನುಕೂಲ ಪಡೆಯದೇ ಇರುವ ಸಮುದಾಯವಿಲ್ಲ ಎಲ್ಲಾ ಸಮುದಾಗಳಿಗೆ ವ್ಯಾಪಾರ ವ್ಯಹಿವಾಟಿಗೆ ಅನುಕೂಲವಾಗಲು ಜಾಗವನ್ನು ಗುರುತಿಸಿದ್ದಾರೆ ಕೃಷಿ, ವ್ಯಾಪಾರ, ಕಾರ್ಮಿಕರ ಮಧ್ಯೆ ಸ್ನೇಹದ ಮನೋಭಾವವನ್ನು ಬೆಳೆಸುವಂತೆ ಕೆಂಪೇಗೌಡರ ಹಾದಿಯಲ್ಲಿ ಸಾರಿಗೆ ನೌಕರರು ನಡೆಯುತ್ತಿರುವುದು ಅಭಿನಂದನಿಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಗೌರವ ಅಧ್ಯಕ್ಷ ಬಿಸಪ್ಪಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ವೈ.ಶಿವಕುಮಾರ್, ಕೆ.ಎಸ್.ಆರ್.ಟಿ.ಸಿ ಕೆಂಪೇಗೌಡ ನೌಕರರ ಸಂಘದ ಅಧ್ಯಕ್ಷ ಉಪ್ಪುಕಂಟೆ ಮುರಳಿ, ಉಪಾಧ್ಯಕ್ಷ ಸತೀಶ್, ಪ್ರಧಾನ ಕಾರ್ಯದರ್ಶಿ ವೆಂಕಟಾಚಲಪತಿ, ಅಬ್ಬಣಿ ಸೊಣ್ಣಪ್ಪ, ಮುಂತಾದವರು ಇದ್ದರು,

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

7 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

12 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

15 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago