ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು, ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…