ಕೆಂಪೇಗೌಡರ ಆಡಳಿತ ಕಾರ್ಯವೈಖರಿ, ದೂರದೃಷ್ಟಿ ನಮ್ಮೆಲ್ಲರಿಗೂ ಮಾರ್ಗದರ್ಶಕ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬೆಂಗಳೂರು ಇಂದು ವಿಶ್ವದಲ್ಲೇ ಹೆಸರು ಗಳಿಸಲು ಕೆಂಪೇಗೌಡರ ಕಾರ್ಯವೈಖರಿ ಎಲ್ಲರಿಗೂ ಮಾದರಿ. ದೇವನಹಳ್ಳಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಒಂದು ಸಂಸ್ಥೆ ನಿರ್ಮಿಸಿ ಕೆಂಪೇಗೌಡರ ಇತಿಹಾಸ, ಅಭಿವೃದ್ಧಿ ಕಾರ್ಯಗಳು, ಆದರ್ಶಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು, ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕು ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ದೇವನಹಳ್ಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಹಮ್ಮಿಕೊಳ್ಳಲಾದ ಕೆಂಪೇಗೌಡ ಅವರ ಭಾವಚಿತ್ರ ಹೊತ್ತ ರಥ ಸಂಚಾರಕ್ಕೆ ಹಾಗೂ ಕಲಾತಂಡಗಳ ಮೆರವಣಿಗೆ ನಡೆಯಿತು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

1 hour ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

4 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

4 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

5 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

8 hours ago