ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಲಾಯಿತು. ತಂಬಾಕು ವಸ್ತುಗಳ ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿದ COTPA ತಂಡವು ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 17 ಪ್ರಕರಣಗಳನ್ನು ದಾಖಲಿಸಿ 4200 ರೂಗಳ ದಂಡವನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಎನ್ ಟಿ ಸಿ ಪಿ ಉಪ ನಿರ್ದೇಶಕರಾದ ಡಾ.ರಜನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುರುಳಿ ಮೋಹನ್, ಡಾ.ಶ್ರೀದೇವಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಪೊಲೀಸ್ ಇಲಾಖೆ ಸಿಬ್ಬಂದಿ ಪ್ರಭಾಕರ್, ಜೇಲ್ ಥೋಮಸ್ ಸೇರಿದಂತೆ ಜಿಲ್ಲಾ ಮಟ್ಟದ ತನಿಖಾ ತಂಡದವರು ಹಾಜರಿದ್ದರು.