ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 32.97 ಲಕ್ಷ ಎಂದು ಅಂದಾಜಿಸಲಾಗಿದೆ.
ಆ.07-10-2026: ಬ್ಯಾಂಕಾಕ್‌ನಿಂದ ಬಂದ ಮತ್ತೊಬ್ಬ ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 930 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 32.55 ಲಕ್ಷ ಎಂದು ಅಂದಾಜಿಸಲಾಗಿದೆ.
ಇ.08-10-2026: ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನಿಂದ ಕಸ್ಟಮ್ಸ್ ತಪಾಸಣೆಯ ವೇಳೆ 1.978 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 69.23 ಲಕ್ಷವಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಗಾಂಜಾವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಈ.08-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನಿಂದ 1.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 39.20 ಲಕ್ಷ ಎಂದು ಅಂದಾಜಿಸಲಾಗಿದೆ. ಕಸ್ಟಮ್ಸ್ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಗಾಂಜಾವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಹೈಡ್ರೋಪೋನಿಕ್ ಗಾಂಜಾದ ಒಟ್ಟು ತೂಕ 4.97 ಕೆ.ಜಿ. ಆಗಿದ್ದು, ಒಟ್ಟು ಅಂದಾಜು ಮೌಲ್ಯ 1.73 ಕೋಟಿ ಆಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ಅಕ್ರಮ ಸಾಗಣೆ ತಡೆ ಕಾಯ್ದೆ (NDPS Act), 1985ರ ಅಡಿಯಲ್ಲಿ ಬಂಧಿಸಲಾಗಿದೆ.
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…