ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ ಎಂದರು.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಮೂಲಕ, ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು , ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 hour ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

2 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

17 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago