ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆ ಕಟ್ಟಿದ ದಸರಾ ಸಂಭ್ರಮ: ಪಟ್ಟದ ಬೊಂಬೆಗಳ ಪ್ರದರ್ಶನ ಮಾಡಿ ನಾಡಿನ‌ ಸಂಸ್ಕೃತಿ ಸಾರಿದ ಏರ್ಪೋರ್ಟ್ ಸಿಬ್ಬಂದಿ

ಎಲ್ಲರ ಚಿತ್ತ ಮೈಸೂರಿನ ದಸರಾ ಸಂಭ್ರಮದತ್ತ. ನಾಡಿನ ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ದಸರಾ ಅಂದ ಕೂಡಲೇ ಥಟ್ ಅಂತ ನೆನಪಿಗೆ ಬರೋದು ಬೊಂಬೆಗಳ‌ ಪೂಜೆ. ಹಾಗಾಗಿ ದೇಶ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ನಾಡಿನ ಕಲೆ, ಸಂಸ್ಕೃತಿ, ಈ ನೆಲ, ಜಲದ ಬಗ್ಗೆ ಅರಿವು ಮೂಡಿಸಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ ಮಾಡಿದೆ.

ಹೌದು, ಹೀಗೆ ಡೊಳ್ಳು‌ ಕುಣಿತಕ್ಕೆ ಭರ್ಜರಿ ಸ್ಟೆಪ್ಸ್ ಹಾಕುತ್ತಿರುವ ಸಿಬ್ಬಂದಿ, ಬೊಂಬೆಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ಪ್ರಯಾಣಿಕರು, ವಿವಿಧ ಕಥೆಗಳನ್ನ ಸಾರುವ ಬೊಂಬೆಗಳ ಪ್ರದರ್ಶನ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ. ನವರಾತ್ರಿ ಆಚರಣೆ ಹಿನ್ನೆಲೆ ಮನೆಗಳಲ್ಲಿ ಬೊಂಬೆ ಪೂಜೆ ಮಾಡುವುದು ವಾಡಿಕೆ. ಕೆಲವರು ಕೆಲಸದ ಒತ್ತಡದಿಂದ ಬೊಂಬೆ ಪೂಜೆ ಮಾಡುವುದಿಲ್ಲ‌. ಹಾಗಾಗಿ ಏರ್ಪೋರ್ಟ್ ನಲ್ಲಿ ಈ ಬಾರಿ ಕಮಲಾಕೃತಿಯಲ್ಲಿ ಬೊಂಬೆಗಳನ್ನ ಪ್ರದರ್ಶನಕ್ಕೆ ಇರಿಸಲಾಗಿದೆ. ಪ್ರಮುಖವಾಗಿ ರಾಮಾಯಣ, ಕುರುಕ್ಷೇತ್ರ, ನರಸಿಂಹ ಅವತಾರಗಳನ್ನು ಸಾರುವ ಬೊಂಬೆಗಳ ಜೊತೆಯಲ್ಲಿ ಗಣಪತಿ, ಚಾಮುಂಡಿ, ಲಕ್ಷ್ಮೀ ಸೇರಿ ವಿವಿಧ ದೇವರ ಬೊಂಬೆಗಳ‌ ಪ್ರದರ್ಶನ ಮಾಡಲಾಗಿದೆ.

ಇನ್ನೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿಯೇ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ. ಹಾಗಾಗಿ ಇಲ್ಲಿಗೆ ದೇಶ ವಿದೇಶದಿಂದ ಪ್ರಯಾಣಿಕರು ಆಗಮಿಸುತ್ತಾರೆ. ಹಾಗಾಗಿಯೇ ಏರ್ಪೋರ್ಟ್ ಆಡಳಿತ ಮಂಡಳಿ ಕರ್ನಾಟಕದ ನೆಲ, ಜಲ, ಸಂಸ್ಕೃತಿ ಸಾರವು ಕಲಾತಂಡಗಳನ್ನು ಕರೆಸಿ ನೃತ್ಯ ಮಾಡಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಡೊಳ್ಳು ಕುಣಿತ, ಗಾರುಡಿ ಗೊಂಬೆ, ಬೇಡರ ನೃತ್ಯ, ತಮಟೆ ವಾದ್ಯ, ಗೊಂಬೆಯಾಟ, ಯಕ್ಷಗಾನ, ಸುಗಮ ಸಂಗೀತ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಟ್ಟು 9 ದಿನಗಳ ಕಾಲ ಆಯೋಜನೆ ಮಾಡಿದ್ದಾರೆ. ಇನ್ನೂ ಈ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಟಿಕೆಟ್ ಅಥವಾ ದರ ಇಲ್ಲ, ಎಲ್ಲರಿಗೂ ಉಚಿತವಾಗಿ ನೋಡಬಹುದು.

ಒಟ್ಟಾರೆ…ಎಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದ್ದು, ಏರ್ಪೋರ್ಟ್ ನಲ್ಲಿಯೂ ಕೂಡ ದಸರಾ ಸಂಭ್ರಮ ಕಳೆಗಟ್ಟಿದೆ. ಉತ್ತರ ಭಾರತದ ಪ್ರಯಾಣಿಕರು ದಸರಾ ಬೊಂಬೆಗಳನ್ನು ನೋಡಿ ಸಂತಸಪಟ್ಟು, ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

10 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

14 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

17 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago