ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮ

ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ರಂಗಮಂದಿರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಆಹಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು..

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿದರೆ ಅದಕ್ಕೆ ಬೇಕಾಗುವ ಸಹಕಾರ ನೀಡಲಾಗುವುದು. ಇತ್ತೀಚೆಗೆ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಗೆ ತರಲು ತಾಯಂದಿರಿಗೆ ಮಾತ್ರ ಸಾಧ್ಯ. ಮಕ್ಕಳಿಗೆ ಒಳ್ಳೆ ನಡತೆ, ವಿದ್ಯಾಭ್ಯಾಸ, ಮಾನವೀಯ ಮೌಲ್ಯಗಳನ್ನು ಕಲಿಸಬೇಕು… ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕು. ಅದಕ್ಕೆ ಸಹಕಾರ ನೀಡಲಾಗುವುದು ಎಂದರು…

ಈ ವೇಳೆ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜ್, ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್, ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ, ಗೌರವ ಅಧ್ಯಕ್ಷೆ ರೇವತಿ ಆನಂತರಾಮ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಇತರರು ಉಪಸ್ಥಿತರಿದ್ದರು….

Leave a Reply

Your email address will not be published. Required fields are marked *

error: Content is protected !!