ಕೆಂಪೇಗೌಡ ದೂರಗಾಮಿ ಚಿಂತನೆಯ ನಾಯಕ-ಕರ್ನಾಟಕದ ಅಗ್ರಗಣ್ಯ ಆಡಳಿತಗಾರ -ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ

ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಇದ್ದ ಪಾಳ್ಯಗಾರರಲ್ಲಿ ಕೆಂಪೇಗೌಡರು ಪ್ರಮುಖರು. ಬೆಂಗಳೂರು ನಗರಕ್ಕೆ ಕಾಯಕಲ್ಪ ಹಾಕಿದವರು. ಬಹಳ ದೂರಗಾಮಿ ಚಿಂತನೆ ಮತ್ತು ಕಾರ್ಯಾಚರಣೆ ಅವರ ಆಡಳಿತದಿಂದಾಗಿ ಇಂದು ಬೆಂಗಳೂರು ಅಗಾಧವಾಗಿ ಬೆಳೆಯಲು ಸಾಧ್ಯವಾಗಿದೆ. 1510ರಲ್ಲಿ ಜನಿಸಿದ ಕೆಂಪೇಗೌಡ ಸುಕ್ಷಿತರೂ ಹಾಗು ದಕ್ಷ ಆಡಳಿತಕ್ಕೆ ಹೆಸರಾದವರು. ಬೆಂಗಳೂರಿನಲ್ಲಿ ವಿವಿಧ ದಿಕ್ಕಿನಲ್ಲಿ ಮಹಾದ್ವಾರಗಳನ್ನು ನಿರ್ಮಿಸಿದರು. ನಗರದ ಹಲವೆಡೆ ಕೆರೆ ಕಟ್ಟೆಗಳನ್ನು ಕಟ್ಟಿಸಿದರು. ಹಲವು ಪ್ರದೇಶಗಳಲ್ಲಿ ದೇವಸ್ಥಾನಗಳನ್ನು ಕಟ್ಟಿದರು ಎಂದು ವಿಶ್ಲೇಷಿಸಿದರು.

*ಕೆರೆ, ದೇಗುಲಗಳ ನಿರ್ಮಾತೃ*:

ಬೆಂ.ಗ್ರಾ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ವಿವಿಧ ಸಮುದಾಯಗಳ ಕಸುಬುಗಳ ಬೆಳವಣಿಗೆಗೆ ಪೂರಕವಾದ ವ್ಯವಹಾರದ ವಾತಾವರಣವನ್ನು ನಿರ್ಮಿಸಿದ ಕೆಂಪೇಗೌಡರು, ಅದಕ್ಕಾಗಿ ವಿವಿಧ ಪೇಟೆಗಳು ಮತ್ತು ಬೀದಿಗಳನ್ನು ಹುಟ್ಟುಹಾಕಿದರು. ವಿಶಾಲ ರಸ್ತೆಗಳು ತಯಾರಾದವು. 1569ರವರೆಗೂ ಬದುಕಿದ್ದ ಕೆಂಪೇಗೌಡರು ಬೆಂಗಳೂರಿನಲ್ಲಿ ಸ್ಥಾಪಿಸಿದ ಕೆರೆ ಕಟ್ಟೆಗಳು, ದೇವಸ್ಥಾನಗಳು, ದ್ವಾರಗಳು ಈಗಲೂ ಕಾಣಸಿಗುತ್ತವೆ. 1537ರಲ್ಲಿ ಕೆಂಪೇಗೌಡರು ಬಸವನಗುಡಿ ನಂದಿ ಮಂದಿರವನ್ನು ಕಟ್ಟಿದರು. ಅದೇ ರೀತಿ ಗವಿಗಂಗಾಧರೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಅಲಸೂರು ಸೋಮೇಶ್ವರ ದೇವಸ್ಥಾನದ ಪುನಶ್ಚೇತನ, ಧರ್ಮಾಂಬುಧಿ, ಕೆಂಪಾಂಬುಧಿ, ಸಂಪಂಗಿ ಕೆರೆ, ಸಿದ್ದಿಕಟ್ಟೆ, ಕಾರಂಜಿ ಕಟ್ಟೆ ಇತ್ಯಾದಿ ಕೆರೆ ಕಟ್ಟೆಗಳನ್ನು ಕೆಂಪೇಗೌಡರು ನಗರದ ಹಲವೆಡೆ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ ಎಂದು ಉಲ್ಲೇಖಿಸಿದರು.

*ಕುಶಲ ಕಲೆಗಳ ಪೋಷಕ:*

ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕೆಂಪೇಗೌಡ ನಾಲ್ಕು ಮಹಾದ್ವಾರ ಬೆಂಗಳೂರು ನಗರದ ಗಡಿಭಾಗವನ್ನು ಗುರುತಿಸಲು ವಿವಿಧ ದಿಕ್ಕುಗಳ ಅಂಚಿನಲ್ಲಿ ಕೆಂಪೇಗೌಡರು ನಾಲ್ಕು ಮಹಾದ್ವಾರಗಳನ್ನು ಕಟ್ಟಿದ್ದಾರೆ. ಇವಲ್ಲದೇ ಕೆಂಪೇಗೌಡರು ಇನ್ನೂ ಐದು ಸಣ್ಣ ದ್ವಾರಗಳನ್ನೂ ಕಟ್ಟಿದ್ದರು. ರೈತರ ಅಕ್ಕಿ, ರಾಗಿ, ಹತ್ತಿ, ವಿವಿಧ ದವಸ ಧಾನ್ಯಗಳ ಮಾರಾಟಕ್ಕೆ ಪ್ರತ್ಯೇಕ ಮಾರುಕಟ್ಟೆ ರಚಿಸಿದರು. ವಿವಿಧ ಸಮುದಾಯಗಳ ಕಸುಬುಗಳಾದ ಮಡಿಕೆ ತಯಾರಿಕೆ, ಕೈಮಗ್ಗ, ಕೈಕುಸುರಿ ಇತ್ಯಾದಿಗಳಿಗೂ ಪ್ರತ್ಯೇಕ ಪೇಟೆಗಳನ್ನು ಕಟ್ಟಿದರು. ದೇಶದ ವಿವಿಧೆಡೆಯಿಂದ ಕರಕುಶಲರನ್ನು ಮತ್ತು ಕಸುಬುದಾರರನ್ನು ಬೆಂಗಳೂರಿಗೆ ಕರೆತಂದು ಇಲ್ಲಿನ ಮಾರುಕಟ್ಟೆ ವಿಸ್ತರಿಸಿದರು ಎಂದು ವಿವರಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಎಚ್.ಎಸ್.ರೇವತಿ ಅನಂತರಾಮ್, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಅನಂತರಾಮ್, ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಘಟಕದ ಅಧ್ಯಕ್ಷ ದಾದಾಫೀರ್, ಕಾರ್ಯದರ್ಶಿ ಸುರೇಶ್, ಸಫೀರ್, ನಾಡಪ್ರಭು ಕೆಂಪೇಗೌಡ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ, ಕಾರ್ಯದರ್ಶಿ ಲಕ್ಷ್ಮಿ, ಪದಾಧಿಕಾರಿಗಳಾದ ಭಾಗ್ಯ,‌ ಮಂಗಳ, ರಶ್ಮಿ, ಸವಿತಾ, ಅಪೂರ್ವ, ಕಲಾವಿದ ಹಾಡೋನಹಳ್ಳಿ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

2 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

2 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

5 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

8 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

20 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

21 hours ago