ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುಮಾರು 8.38 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್‌, ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಒಟ್ಟು 23.960 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

2026ರ ಅಕ್ಟೋಬರ್ 22ರಂದು ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಈ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಸ್ಟಮ್ಸ್ ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗಾಂಜಾವನ್ನು ಬಚ್ಚಿಟ್ಟು ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಪ್ರಕರಣದಲ್ಲಿ 3.010 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 1.05 ಕೋಟಿ ಎಂದು ಅಂದಾಜಿಸಲಾಗಿದೆ. ಎರಡನೇ ಪ್ರಕರಣದಲ್ಲಿ 8.940 ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ 3.13 ಕೋಟಿ ಎಂದು ತಿಳಿಸಲಾಗಿದೆ.

ಮೂರನೇ ಪ್ರಕರಣದಲ್ಲಿ 12.010 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 4.20 ಕೋಟಿ ಎಂದು ಅಂದಾಜಿಸಲಾಗಿದೆ.

ಮೂರು ಪ್ರಕರಣಗಳಲ್ಲಿ ಒಟ್ಟು 23.960 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟು ಅಂದಾಜು ಮೌಲ್ಯ 8.38 ಕೋಟಿ ಆಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Leave a Reply

Your email address will not be published. Required fields are marked *

error: Content is protected !!