ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್, ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಒಟ್ಟು 23.960 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
2026ರ ಅಕ್ಟೋಬರ್ 22ರಂದು ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಈ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಸ್ಟಮ್ಸ್ ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗಾಂಜಾವನ್ನು ಬಚ್ಚಿಟ್ಟು ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಪ್ರಕರಣದಲ್ಲಿ 3.010 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 1.05 ಕೋಟಿ ಎಂದು ಅಂದಾಜಿಸಲಾಗಿದೆ. ಎರಡನೇ ಪ್ರಕರಣದಲ್ಲಿ 8.940 ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ 3.13 ಕೋಟಿ ಎಂದು ತಿಳಿಸಲಾಗಿದೆ.
ಮೂರನೇ ಪ್ರಕರಣದಲ್ಲಿ 12.010 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 4.20 ಕೋಟಿ ಎಂದು ಅಂದಾಜಿಸಲಾಗಿದೆ.
ಮೂರು ಪ್ರಕರಣಗಳಲ್ಲಿ ಒಟ್ಟು 23.960 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟು ಅಂದಾಜು ಮೌಲ್ಯ 8.38 ಕೋಟಿ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದಿದ್ದು, ಶೇಕಡ…
ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದು, ಅವರ ಪರವಾಗಿ ಎನ್‌ಡಿಎ ನಾಯಕರು, ಮುಖಂಡರು…
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಕಾರ್ಯವು ಜಿಲ್ಲೆಯ 06 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು ಅಪರಾಹ್ನ 12 ಗಂಟೆಯವರೆಗೆ ಶೇ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಘುಮೇನಹಳ್ಳಿ ಸೇರಿದಂತೆ ತೂಬಗೆರೆ ಸುತ್ತಮುತ್ತಲಿನ ಕೆಲ ಪ್ರದೇಶದಲ್ಲಿ ಶುಕ್ರವಾರ (ಅ.23) ಬೆಳಿಗ್ಗೆ ಸುಮಾರು…
ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಬರದ ತೀವ್ರತೆ, ಅಂತರ್ಜಲ ಮಟ್ಟ ಕುಸಿತ ಹಾಗೂ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿರುವ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ…