ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.
ನಗರದ ಕೆಆರ್ ಎಸ್ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.
ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.
ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ
1.ಕೆ.ವಿ.ನಾಗರಾಜ್-ಅಧ್ಯಕ್ಷ
2.ಡಿ.ಎಂ.ಶ್ರೀನಿವಾಸ್-ಉಪಾಧ್ಯಕ್ಷ
3.ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ
4.ಮಂಜುನಾಥ್-ಕಾರ್ಯದರ್ಶಿ
5.ಪಾಪಣ್ಣ-ಕಾರ್ಯದರ್ಶಿ
6.ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ
7.ಎಸ್.ಬಾಲಕೃಷ್ಣ-ಸಂಘಟನಾ ಕಾರ್ಯದರ್ಶಿ
ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…