ಕೋಲಾರ: ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಗಳಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರನ್ನು ಬುಧವಾರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎನ್ ಶ್ರೀನಾಥ್ ಮಾತನಾಡಿ ಸಾರಿಗೆ ಇಲಾಖೆ ಎಂಬುದು ಒಂದು ಕುಟುಂಬ ಇದ್ದಂತೆ ಇಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರವೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ರಾಜ್ಯ ಸರಕಾರದ ಶಕ್ತಿ ಯೋಜನೆಯು ಬಂದ ನಂತರದಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಯ ಜವಾಬ್ದಾರಿ ಹೆಚ್ಚಾಗಿದ್ದು ಎಲ್ಲವನ್ನೂ ನಿಭಾಯಿಸಲು ಸಹ ಸಿದ್ದರಾಗಿದ್ದಾರೆ ಇವತ್ತು ನಿವೃತ್ತಿ ಹೊಂದುತ್ತಿರುವರ ಸೇವೆಯೂ ಸಾರಿಗೆ ಸಂಸ್ಥೆಗೆ ಮುಖ್ಯವಾಗಿತ್ತು ಇವರ ನಿವೃತ್ತಿ ಜೀವನವು ಮುಂದಿನ ದಿನಗಳಲ್ಲಿ ಸುಖಕರವಾಗಿರಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನ ಅಧಿಕಾರಿ ಮಂಜುನಾಥ್, ವಿಭಾಗೀಯ ಯಂತ್ರಣಾಧಿಕಾರಿ ನವೀನ್ ಕುಮಾರ್, ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಾಮಮೂರ್ತಿ, ರಮೇಶ್( ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ರಾಮಮೂರ್ತಿ, ಶ್ಯಾಮೇಗೌಡ, ಶ್ರೀನಿವಾಸಗೌಡ, ವೆಂಕಟೇಶ್ ಗೌಡ, ವಕ್ಕಲೇರಿ ಮಂಜುನಾಥ್, ಜಯಚಂದ್ರ, ಸುಬ್ರಮಣಿ ಮತ್ತು ನಾಗೇಂದ್ರ ಪ್ರಸಾದ್ ಅವರ ಕುಟುಂಬ ವರ್ಗ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…