
ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ಕೆಎಸ್ಆರ್ ಟಿಸಿ ಬಸ್ ಹಾಗೂ ಕ್ಯಾಂಟರ್ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದ ಭೀಕರತೆಗೆ ಕೆಎಸ್ಆರ್ಟಿಸಿ ಬಸ್ ಹಾಗು ಕ್ಯಾಂಟರ್ ನ ಮುಂಭಾಗ ನುಜ್ಜುಗುಜ್ಜಾಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಅತಿ ವೇಗ ಹಾಗೂ ನಿರ್ಲಕ್ಷದ ಚಾಲನೆಗೆ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ… ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.