ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಬೆಳಕಿಗೆ ಬಂದಿದೆ.

ಬಾಲಕಿಯರ ತಂದೆಯೇ ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕೆಐಎಎಲ್ ಏರ್‌ಪೋರ್ಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಬಾಲಕಿಯರನ್ನು ಶೈಕ್ ಝಹೆರಾ (5) ಹಾಗೂ ಶೈಕ್ ಝೋಯಾ (10) ಎಂದು ಗುರುತಿಸಲಾಗಿದೆ. ನಾಗವಾರ ಮೂಲದ ಎಸ್.ಜಿ. ಇಮ್ರಾನ್ (40) ಎಂಬಾತ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನ ನಾಲ್ಕನೇ ಮಹಡಿಯಲ್ಲಿ ಕೊಠಡಿ ಬುಕ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಸೋಮವಾರ ಸಂಜೆ ಹೋಟೆಲ್‌ನ ಭದ್ರತಾ ಸಿಬ್ಬಂದಿಯಿಂದ ಪೊಲೀಸರಿಗೆ ಮಾಹಿತಿ ಬಂದಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಬ್ಬರು ಬಾಲಕಿಯರು ಮೃತಪಟ್ಟಿರುವುದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಇಬ್ಬರು ಬಾಲಕಿಯರಿಗೆ ನೇಣು ಬಿಗಿದಿರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳ ಸಾವಿನ ಬಳಿಕ ತಂದೆ ಇಮ್ರಾನ್ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದ್ದು, ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತ್ನಿಯ ಮೇಲಿನ ಅನುಮಾನ ಶಂಕೆ

ಇಮ್ರಾನ್‌ಗೆ ಪತ್ನಿಯ ಮೇಲೆ ಅನುಮಾನವಿತ್ತು ಎನ್ನಲಾಗಿದ್ದು, ಇದೇ ಕಾರಣಕ್ಕೆ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಇಮ್ರಾನ್ ಡೆತ್‌ನೋಟ್ ಬರೆದಿಟ್ಟಿದ್ದ ಎನ್ನಲಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್‌ನೋಟ್‌ನಲ್ಲಿ ಏನು ಉಲ್ಲೇಖಿಸಲಾಗಿದೆ, ಮಕ್ಕಳ ಸಾವಿಗೆ ನಿಖರ ಕಾರಣವೇನು ಹಾಗೂ ಘಟನೆ ನಡೆದ ಸಂದರ್ಭಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಘಟನಾ ಸ್ಥಳಕ್ಕೆ ಕೆಐಎಎಲ್ ಏರ್‌ಪೋರ್ಟ್ ಪೊಲೀಸರು ಭೇಟಿ ನೀಡಿ ಹೋಟೆಲ್ ಕೊಠಡಿ, ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

3 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

15 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

21 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

22 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago