ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೊಡಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವರನ್ನ ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ ಬುಧವಾರ ಬೆಳಿಗ್ಗೆ ಭೇಟಿ ಮಾಡಿ ರೈತರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.
ಈ ವಿಚಾರವಾಗಿ ರಾಜ್ಯದ ಬೃಹತ್ ಕೈಗಾರಿಕಾ ಸಚಿವರು ಆದ ಎಂ.ಬಿ.ಪಾಟೀಲ್ ರವರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ರೈತರ ವಿಚಾರವಾಗಿ ಸೂಕ್ತ ನಿರ್ಣಯ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಲು ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹ ರೈತರ ಸಮಸ್ಯೆಗಳನ್ನು ಚರ್ಚಿಸಿದ ಅವರು ರೈತರ ಮನವಿಗೆ ಸ್ಪಂದಿಸುವಂತೆ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಜರುಗಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೊನಘಟ್ಟ ಕೊಡಹಳ್ಳಿ ಗ್ರಾಮಗಳ ರೈತರು ಹಾಗೂ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…