ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.
ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…