ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಸೇರಿದಂತೆ ಐದು ಗ್ರಾಮಗಳ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದಕ್ಕೆ ರೈತರು ತೀವ್ರ ಆಕ್ರೋಶ ಹೊರಹಾಕಿದರು.
ದೊಡ್ಡಬೆಳವಂಗಲ ಹೋರಾಟ ಕೇಂದ್ರದಿಂದ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದವರೆಗೆ ನಡೆದ ರ್ಯಾಲಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಲ್ಲಿ ರೈತರು ಭಾಗವಹಿಸಿ ಪ್ರತಿಭಟನೆ ನಡೆಸಿದರು.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ರೈತರ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ವಿಶೇಷವಾಗಿ ಚನ್ನರಾಯಪಟ್ಟಣ ಭೂ ಸ್ವಾಧೀನ ಹೋರಾಟ ಸಮಿತಿಯೂ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಾಜ್ ಮುನಿರಾಜು ಹಾಗೂ ಮಾಜಿ ಶಾಸಕ ವೆಂಕಟರಮಣಯ್ಯ ಭಾಗವಹಿಸಿ ರೈತರ ಪರವಾಗಿ ಧ್ವನಿ ಎತ್ತಿದರು.
“ಫಲವತ್ತಾದ ಕೃಷಿ ಭೂಮಿ ನಮ್ಮ ಜೀವನಾಧಾರ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಕೂಡಲೇ ಹಿಂದೆ ಸರಿಯಬೇಕು. ನಮ್ಮ ಭೂಮಿ ನಮಗೇ ಉಳಿಯಬೇಕು. ಒಂದು ವೇಳೆ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದುವರಿಸಿದರೆ ತಕ್ಕ ಪಾಠ ಕಲಿಸುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದರು.
ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…