ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಮಾಡುತ್ತಿದ್ದ ರೈಲನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಿನ್ನೆ ಸಂಜೆ 7.30ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ರೈಲು.ಇಂದು ಬೆಳಗ್ಗೆ ಮಹಾರಾಷ್ಟ್ರ ಸೊಲ್ಲಾಪುರದ ಸಮೀಪ ರೈಲಿನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಸಾವಿರಾರು ಪ್ರಯಾಣಿಕರ ಪ್ರಾಣ ಬಚಾವ್ ಆಗಿದೆ. ಘಟನೆಯಲ್ಲಿ ಲೋಕೋ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿದ್ಯುತ್ ಚಾಲಿತ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮೂಲಗಳಿಂದ ತಿಳಿದು ಬಂದಿದೆ. ರೇಲ್ವೇ ಇಂಜಿನ್ ನಿಂದ ಹೊರ ಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಕೆಲಕಾಲ ಭಯಭೀತರಾಗಿದ್ದರು.
ಘಟನಾ ಸ್ಥಳಕ್ಕೆ ತಕ್ಷಣ ರೈಲ್ವೆ ಸಿಬ್ಬಂದಿ ಹಾಗೂ ಸ್ಥಳೀಯರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲಿಗೆ ಇನ್ನೊಂದು ಇಂಜಿನ್ ಅಳವಡಿಸಿ ದೆಹಲಿ ಪ್ರಯಾಣ ಬೆಳಸಲಾಯಿತು.