Categories: ಕೋಲಾರ

ಕೆಜಿಎಫ್ ನಲ್ಲಿ ಹೊಸ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ: ಯರಗೋಳ್ ಯೋಜನೆಗೆ ಶಂಕುಸ್ಥಾಪನೆ

ಬಾರಿಯ ಬಜೆಟ್ ನಲ್ಲಿ ಕೆಜಿಎಫ್ ನಲ್ಲಿರುವ 965  ಕೈಗಾರಿಕಾ ಪ್ರದೇಶದವನ್ನು ಬಿ.ಇ.ಎಂ.ಎಲ್ ನಿಂದ ಹಿಂಪಡೆದು ಅಲ್ಲಿ ಹೊಸ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು. ಹಿಂದೆ ಪ್ರತ್ಯೇಕವಾಗಿದ್ದ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಒಂದು ಮಾಡಲಾಗಿತ್ತು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತ್ಯೇಕ ಡೈರಿ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಪ್ರತಿ 2 ತಿಂಗಳು ವಿದ್ಯುತ್ ಬಿಲ್ಲು ಕಟ್ಟಲಾಗುತ್ತಿತ್ತು. ಅದನ್ನು ತಪ್ಪಿಸಲು 50 ಎಕರೆ ಜಾಗದಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಸೋಲಾರ್ ಘಟಕ ಸ್ಥಾಪನೆಗೆ ಪರವಾನಗಿ ನೀಡಲಾಗಿದೆ. ಕೋಲಾರ ಹಾಲು ಒಕ್ಕೂಟದಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು‌.

ಇಂದು ಕೋಲಾರ, ಬಂಗಾರಪೇಟೆ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬರಗಾಲವಿದ್ದರೂ 2,263 ಕೋಟಿ ರೂ.ಗಳನ್ನು ಜಿಲ್ಲೆಯ ಅಭಿವೃದ್ಧಿಗಾಗಿ ನೀಡಿದ್ದೇವೆ. ಕೆ.ಹೆಚ್.ಮುನಿಯಪ್ಪ ಅವರು ಸಚಿವರಾಗಿದ್ದಾಗ 83 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿರುವುದಕ್ಕಾಗಿ ಹಾಗೂ ಯೋಜನೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

ಒಂದು ಕಾಲದಲ್ಲಿ ಕೋಲಾರ, ಬಂಗಾರಪೇಟೆಯಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ನೀಡುವ ಪರಿಸ್ಥಿತಿ ಇತ್ತು. ಕುಡಿಯುವ ನೀರು ಸಿಗುತ್ತಿರಲಿಲ್ಲ. ಅದಕ್ಕೆ ಯೋಚಿಸಿ ಮಾರ್ಕಾಂಡೇಯ ನದಿಗೆ ಯರಗೊಳ್ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಿ ನೀರು ಶೇಖರಿಸಿ ಮೂರೂ ಪಟ್ಟಣಗಳಿಗೆ ಕುಡಿಯುವ ನೀರು ಕೊಡುವ ಯೋಜನೆ ರೂಪಿಸಲಾಯಿತು. ಇದು ಇಂದು ಕಾರ್ಯಗತವಾಗುತ್ತಿರುವ ಹಿಂದೆ ಮಾಜಿ ಸಚಿವ ಶ್ರೀನಿವಾಸಗೌಡ ಅವರ ಕೊಡುಗೆಯನ್ನು ಸ್ಮರಿಸಬೇಕು. ಟೀಚರ್ ಚಂದ್ರಪ್ಪ, ನಾರಾಯಣಸ್ವಾಮಿ ಅವರನ್ನು ಸ್ಮರಿಸಬೇಕು ಎಂದು ಹೇಳಿದರು.

ಯರಗೋಳ್ ಯೋಜನೆ 2006ರಲ್ಲಿ ಪ್ರಾರಂಭವಾದರೂ, ಕಾರ್ಯಗತವಾಗಲಿಲ್ಲ. ಬಂಗಾರಪೇಟೆ  ಶಾಸಕ ನಾರಾಯಣಸ್ವಾಮಿಯವರು ಒತ್ತಾಯ ಮಾಡಿ ಚಾಲನೆ ನೀಡಿದರು. ಹಾಗಾಗಿ ಇದಕ್ಕೆ ಚಾಲನೆ ದೊರಕುತ್ತಿದೆ. 38.1 ಗಜ ಆಳದಲ್ಲಿ ನೀರು ನಿಲ್ಲಲಿದೆ. ಈ ಮೂರು ಪಟ್ಟಣ ಗಳಿಗೆ ನೀರು ಸಾಕಾಗುತ್ತದೆ ಎನ್ನುವುದು ನನ್ನ ಭಾವನೆ. ಕೆಜಿಎಫ್ ಶಾಸಕಿ ರೂಪ ಅವರೂ ಕೂಡ ಕೆಜಿಎಫ್ ಗೆ ಯರಗೋಳ್ ಯೋಜನೆಯಿಂದ ನೀರು ಒದಗಿಸಲು ಕೋರಿದ್ದು, ಈ ಬಗ್ಗೆ ಚರ್ಚೆ ಮಾಡಿ ನೀರು ಸಿಕ್ಕರೆ ಎಷ್ಟೇ ಖರ್ಚಾದರೂ ನೀರು ಕೊಡುತ್ತೇವೆ ಎಂದರು.

ಒಂದು ಕ್ಷೇತ್ರದಲ್ಲಿ 2,223  ಕೋಟಿ ರೂ.ಗಳ ಬೃಹತ್ ಮೊತ್ತದ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿದೆ. ರಮೇಶ್ ಕುಮಾರ್, ನಂಜೇಗೌಡ, ನಾರಾಯಣಸ್ವಾಮಿ, ಕೆ.ಹೆಚ್.ಮುನಿಯಪ್ಪ, ಕೃಷ್ಣ ಬೈರೇಗೌಡ, ಇವರೆಲ್ಲರೂ ಕೆ.ಸಿ.ವ್ಯಾಲಿಯಾಗಬೇಕು, ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸುತ್ತಿದ್ದರು ಎಂದು ತಿಳಿಸಿದರು.

ಕೋಲಾರ, ಚಿತ್ರದುರ್ಗ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳು. ರಾಜಸ್ಥಾನ ಬಿಟ್ಟರೆ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯ ಕರ್ನಾಟಕ. ಹೆಚ್.ಎನ್.ವ್ಯಾಲಿ, ಕೆ.ಸಿ ವ್ಯಾಲಿ, ಪುಷ್ಪಾವತಿ ವ್ಯಾಲಿ ಜಾರಿ ಮಾಡಿದ ನಾವು. ಎತ್ತಿನಹೊಳೆ ಯೋಜನೆಯನ್ನು ಜಾರಿ ಮಾಡಲೇಬೇಕೆಂದು ಒತ್ತಾಯ ಮಾಡಿದ್ದು ಮಹಾಜನತೆ. ಯೋಜನೆ ಕಾರ್ಯಸಾಧುವಾಗಿದ್ದರೆ ಎಷ್ಟೇ ಖರ್ಚಾದರೂ ಯೋಜನೆ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಯರಗೋಳು ಯೋಜನೆಗೆ  23 ಸಾವಿರ ಕೋಟಿ ರೂ ವೆಚ್ಚವಾಗಿದೆ. ಕೆ.ಸಿ.ವ್ಯಾಲಿಗೆ 1,800 ಕೋಟಿ ರೂ. ಹಾಗೂ ಹೆಚ್.ಎನ್.ವ್ಯಾಲಿಗೆ 800 ಕೋಟಿ ರೂ.ವೆಚ್ಚವಾಗಿದ್ದು, ಇದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿದರು.

ಕೋಲಾರದಲ್ಲಿ ಹಣ್ಣು ತರಕಾರಿ, ರೇಷ್ಮೆ ಬೆಳೆಯುತ್ತಿದ್ದರೆ ಕೆರೆಗಳು ತುಂಬಿರುವುದರಿಂದ. 1200 ಅಡಿಗಳವರೆಗೆ ಕೊರೆದರೂ ನೀರು ಸಿಗದ ಕಾಲವೊಂದಿತ್ತು. ಆದ್ದರಿಂದ ನೀರು ತುಂಬಿ ಅಂತರ್ಜಲ ಮಟ್ಟ ಹೆಚ್ಚಾಗಬೇಕು ಎಂದು ಒತ್ತಾಯಿಸಿದ್ದರು. ಇಲ್ಲಿ ಯಾವುದೇ ಪ್ರಮುಖ ನದಿ ಇಲ್ಲದಿರುವುದರಿಂದ ಕೆರೆಗಳು ತುಂಬುವುದು ಅವಶ್ಯ. ಕುಡಿಯುವ ನೀರು ನೀಡುವುದು ಅತ್ಯಂತ ಅಗತ್ಯ ಎಂದು ಮನಗಂಡು ಮಂಜೂರು ಮಾಡಲಾಯಿತು. ಯರಗೊಳ್ ಯೋಜನೆಗೆ ಅಂದು 13 ಸಾವಿರ ಕೋಟಿ, ಇಂದು 23 ಸಾವಿರ ಕೋಟಿ ರೂ.ಗಳ ವೆಚ್ಚವಾಗುತ್ತಿದೆ. ಎಲ್ಲಾ ಯೋಜನೆಗಳನ್ನು ಈ ಅವಧಿ ಮುಗಿಯುವುದರೊಳಗೆ  ಪೂರ್ಣಗೊಳಿಸಲಾಗುವುದು ಎಂದರು.

ನೀರನ್ನು ಪರೀಕ್ಷೆ ಮಾಡಿಸಿದ್ದು ಹಾನಿಕಾರಕ ಪದಾರ್ಥ ಇಲ್ಲ ಎಂದು ವಿಶ್ವಸಂಸ್ಥೆಯವರು ಭೇಟಿ ನೀಡಿ ಮೆಚ್ಚುಗೆ ನೀಡಿದ್ದಾರೆ. ಕುಮಾರಸ್ವಾಮಿಯವರು ಇದನ್ನು ಅರ್ಥಮಾಡಿಕೊಳ್ಳಬೇಕು. ಕೇರಳದ ಸಮಾಲೋಚಕರೂ ಕೂಡ ಇದನ್ನು ಇತರೆ ರಾಜ್ಯಗಳಲ್ಲಿ ಅನುಕರಿಸಬೇಕು ಎಂದಿದ್ದಾರೆ. ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡಬಾರದು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಜನರ ಸಮಸ್ಯೆಗಳಿಗೆ, ಜನರ ವಿರುದ್ಧವಾಗಿ ದಾರಿತಪ್ಪಿಸುವ ಕೆಲಸವನ್ನು ಮಾಡಬಾರದು. ಕೋಲಾರ ಮಲೆನಾಡು ಆಗುವ ದಿನಗಳು ದೂರವಿಲ್ಲ. ಇದಕ್ಕೆ ಈ ಭಾಗದ ಜನಪ್ರತಿನಿಧಿಗಳು ಕಾರಣ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ  ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳ ನಂತರ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ ಎಂದು ಟೀಕಿಸುವ ವಿರೋಧಿಗಳಿಗೆ ಕಣ್ತೆರೆದು ನೋಡಿ.  ಕಣ್ಣು ಮುಚ್ಚಿಕೊಂಡು, ರಾಜಕೀಯ ಕಾರಣಗಳಿಗಾಗಿ ಮಾತನಾಡಬೇಡಿ. ಇದು ಸಣ್ಣ ಅನುದಾನವಲ್ಲ. ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ, ತುಮಕೂರು,ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯನ್ನು ಯಾರು ಜಾರಿ ಮಾಡಿದ್ದು? ವಿರೋಧಿಸುವವರು ಮಾಡಿಕೊಟ್ಟರೆ? ಎತ್ತಿನಹೊಳೆ ಯೋಜನೆ ಜಾರಿಯಾಗುವುದಿಲ್ಲ ಎನ್ನುವವರಿಗೆ ಇಂದು ಉತ್ತರ ಸಿಕ್ಕಿದೆ ಎಂದರು.

ಕಳೆದ ವರ್ಷವೇ ಈ ಯೋಜನೆ ಜಾರಿಯಾಗಿದ್ದರೆ ಎಲ್ಲರಿಗೂ ನೀರು ದೊರಕುತ್ತಿತ್ತು. ನಮ್ಮ ಅವಧಿಯಲ್ಲಿ ಎತ್ತಿನಹೊಳೆ ಸಂಪೂರ್ಣ ಯೋಜನೆ ಮುಗಿಸಿ ಈ ಭಾಗದ ಜನರಿಗೆ ಕುಡಿಯುವ ನೀರನ್ನು ಕೊಟ್ಟೇಕೊಡುತ್ತೇವೆ. ನಮ್ಮನ್ನು ಟೀಕಿಸುವವರಿಗೆ ಹೊಟ್ಟೆ ಉರಿಯುವಂತೆ  ಕೆಲಸವನ್ನು ಮಾಡುತ್ತೇವೆ. ಕೋಲಾರ ಜಿಲ್ಲೆ ಹಸಿರಾಗಿದ್ದರೆ ಕೆರೆಗಳು ತುಂಬಿರುವುದರಿಂದ. ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ, ಪುಷ್ಪಾವತಿ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ನಮ್ಮ ಕಾಲದಲ್ಲಿ ಮಂಜೂರು ಮಾಡಿದ್ದು ಎಂದು ಹೇಳಿದರು.

 ಕೆ.ಸಿ.ವ್ಯಾಲಿ ಯೋಜನೆ ಜಾರಿ ಮಾಡಬಾರದು. ಅದರ ಮೂಲಕ ಜನರಿಗೆ ವಿಷ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಯೋಜನೆಯಿಂದ ಕೆರೆಗಳು ತುಂಬಿವೆ. ದನಕರುಗಳಿಗೆ ಮೇವಾಗಿದೆ. ಈವರೆಗೆ ಜನ, ದನಕರುಗಳು ಸತ್ತ ಉದಾಹರಣೆ ಇದೆಯೇ? ಎಂದರು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

37 minutes ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

3 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

4 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

18 hours ago