ಕೆಪಿಟಿಸಿಎಲ್ ನೌಕರಿ ಕೊಡಿಸುವುದಾಗಿ 15 ಲಕ್ಷ ರೂ. ವಂಚನೆ: ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಇಂಧನ ಇಲಾಖೆಯಲ್ಲಿ (KPTCL) ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆ ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಂದ ಬರೋಬ್ಬರಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2022ನೇ ಸಾಲಿನಲ್ಲಿ ಈ ಪ್ರಕರಣ ನಡೆದಿದ್ದು ಆರೋಪಿಗಳು ದೂರುದಾರರ ಅಕ್ಕನ ಮಗನಿಗೆ ಕೆಪಿಟಿಸಿಎಲ್ ಇಲಾಖೆಯಲ್ಲಿ ‘ಸೆಕೆಂಡ್ ಡಿವಿಷನ್ ಕ್ಲರ್ಕ್’ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದರು. ಇದನ್ನು ನಂಬಿದ ದೂರುದಾರರಿಂದ ಹಂತ ಹಂತವಾಗಿ ಬ್ಯಾಂಕ್ ಮೂಲಕ ಹಾಗೂ ನಗದು ರೂಪದಲ್ಲಿ ಒಟ್ಟು 15,00,000 ರೂ. ಹಣವನ್ನು ಪಡೆದುಕೊಂಡಿದ್ದರು.

ಆದರೆ, ಹಣ ಪಡೆದ ನಂತರ ಆರೋಪಿಗಳು ಯಾವುದೇ ಕೆಲಸವನ್ನೂ ಕೊಡಿಸದೆ, ಪಡೆದ ಹಣವನ್ನೂ ಮರಳಿಸದೆ ಸತಾಯಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಹೊನ್ನಾವರ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು. ಖಚಿತ ಮಾಹಿತಿಯ ಮೇರೆಗೆ ನವೆಂಬರ್ 15 ರಂದು ಬೆಂಗಳೂರಿಗೆ ತೆರಳಿದ ತಂಡವು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದೆ.

ವಿಜಯ ಕುಮಾರ್ ಕೆ (44): ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿ (ವೃತ್ತಿ: ಕೆಟರಿಂಗ್ ಕೆಲಸ) ಮತ್ತು ವಿಜಯ ಸಿ (46): ಬೆಂಗಳೂರಿನ ಜಯನಗರ/ಬನಶಂಕರಿ ನಿವಾಸಿ (ವೃತ್ತಿ: ಫುಡ್ ಡೆಲಿವರಿ) ಬಂಧಿತ ಆರೋಪಿಗಳು.

ಆರೋಪಿಗಳನ್ನು ನವೆಂಬರ್ 16 ರಂದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ಹಣ ಪಡೆದು ವಂಚಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಮ್.ಎನ್, ಹೆಚ್ಚುವರಿ ಎಸ್ಪಿಗಳಾದ ಜಿ. ಕೃಷ್ಣಮೂರ್ತಿ, ಎಮ್. ಜಗದೀಶ್ ಹಾಗೂ ಭಟ್ಕಳ ಡಿವೈಎಸ್ಪಿ ಮಹೇಶ ಕೆ ಅವರ ಮಾರ್ಗದರ್ಶನದಲ್ಲಿ, ಹೊನ್ನಾವರ ಸಿಪಿಐ ಸಿದ್ದರಾಮೇಶ್ವರ ಎಸ್. ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ತಂಡದಲ್ಲಿ ಎಎಸ್‌ಐ ಗಿರೀಶ ಶೆಟ್ಟಿ, ಸಿಬ್ಬಂದಿಗಳಾದ ಮನೋಜ ಡಿ, ರವಿ ನಾಯ್ಕ, ಗಜಾನನ ನಾಯ್ಕ, ವಿಠಲ ಗೌಡ ಮತ್ತು ಚಂದ್ರಶೇಖರ ನಾಯ್ಕ ಅವರು ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮೇಲಾಧಿಕಾರಿಗಳು ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

4 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

16 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

17 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

17 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

17 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

1 day ago